ಬೆಂಗಳೂರು : ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ನಡುವೆ ಬ್ಯಾನರ್ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ ತಲೆದಂಡದ ಬೆನ್ನಲ್ಲೇ ಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಿವಿಲ್ ರೈಟ್ಸ್ ಮತ್ತು ಎನ್ಫೋರ್ಸ್ಮೆಂಟ್ ವಿಭಾಗಕ್ಕೆ ವರ್ತಿಕಾರನ್ನು ಟ್ರಾನ್ಸ್ಫರ್ ಮಾಡಲಾಗಿದ್ದು, ಬಳ್ಳಾರಿ ವಲಯದ ನೂತನ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಕ ಮಾಡಲಾಗಿದೆ. ಪವನ್ ನೆಜ್ಜೂರು ಅವರ ಅಮಾನತಿನಿಂದ ತೆರವಾಗಿದ್ದ ಎಸ್ಪಿ ಸ್ಥಾನಕ್ಕೆ ಡಾ.ಸುಮನ್ ಡಿ. ಪನ್ನೇಕರ್ ಅವರನ್ನು ನೇಮಿಸಿಯೂ ಸರ್ಕಾರ ಆದೇಶಿಸಿದೆ.

ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನ ಅಮಾನತು ಮಾಡಿತ್ತು. ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರು ಸಸ್ಪೆಂಡ್ ಆಗಿದ್ದರು. ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಹೀಗಾಗಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದರು. ಆ ಬೆನ್ನಲ್ಲೇ ಸರ್ಕಾರ ಕ್ರಮ ಕೈಗೊಂಡಿತ್ತು.
ಇನ್ನು, ಅಮಾನತು ಬೆನ್ನಲ್ಲೇ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿಗಳು ಹರಿದಾಡಿದ್ದವು. ಬಳಿಕ ಈ ಬಗ್ಗೆ ಖುದ್ಧು ಸ್ಪಷ್ಟನೆ ನೀಡಿದ್ದ ಎಸ್ಪಿ ಪವನ್ ನೆಜ್ಜೂರ್ ಅವರ ತಂದೆ, ಯಾವುದೇ ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದರು. ಇದೇ ವಿಚಾರ ಇಟ್ಟುಕೊಂಡು ವಿಪಕ್ಷ ಬಿಜೆಪಿ ರಾಜ್ಯ ಸಕರ್ಕರದ ವಿರುದ್ಧ ಮುಗಿಬಿದ್ದಿತ್ತು.
ಇದನ್ನೂ ಓದಿ : ಕೆಕೆಆರ್ನಿಂದ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ಲೀಗ್ಗೆ ಮುಸ್ತಾಫಿಜುರ್ | 9 ಕೋಟಿ ವೇತನದ ಜೊತೆ ಪರಿಹಾರವೂ ಖೋತಾ!


















