ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO DRDE Junior Research Fellows Recruitment 2026) ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆ: 28
ಸಂದರ್ಶನದ ದಿನಾಂಕ: ಜನವರಿ 8
ಡಿಫೆನ್ಸ್ ರಿಸರ್ಚ್ ಆ್ಯಂಡ್ ಡೆವಲಪ್ ಮೆಂಟ್ ಎಸ್ಟಾಬ್ಲಿಶ್ ಮೆಂಟ್ ನಲ್ಲಿ (DRDE) ಖಾಲಿ ಇರುವ 28 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ ಕೋರ್ಸ್ ಪೂರ್ಣಗೊಳಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ ಸ್ಟೈಪೆಂಡ್ ಕೂಡ ನೀಡಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಧಿಸೂಚನೆ ಓದಿಕೊಳ್ಳುವುದು ಸೇರಿ ವಿವಿಧ ಮಾಹಿತಿಗಾಗಿ ಅಭ್ಯರ್ಥಿಗಳು www.drdo.gov.in ವಿಳಾಸಕ್ಕೆ ಭೇಟಿ ನೀಡಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ
Main Gate Reception, DRDE, Jhansi Road, Gwalior-474 002
ಸಮಯ: ಬೆಳಗ್ಗೆ 9.30
ಇದನ್ನೂ ಓದಿ: ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ | ಕೂಡಲೇ ಅರ್ಜಿ ಸಲ್ಲಿಸಿ


















