ಬೆಂಗಳೂರು : ಕೋಲಾರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Kolar Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಸೀನಿಯರ್ ಲ್ಯಾಬೊರೇಟರಿ ಸೂಪರ್ ವೈಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ|
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಲಾರ
ಹುದ್ದೆ ಹೆಸರು: ಸೀನಿಯರ್ ಲ್ಯಾಬೊರೇಟರಿ ಸೂಪರ್ ವೈಸರ್
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಕೋಲಾರ, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 7
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ ಹಾಗೂ ಡಿಪ್ಲೋಮಾ, ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ kolar.nic.inಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ Office of the District Health and Family Welfare Officer, K.N, Sanatorium Hospital Premises, Bangarpet Road, Kolar ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ
ಇದನ್ನೂ ಓದಿ : ಹೊಸ ವರ್ಷಕ್ಕೆ ನಿಸ್ಸಾನ್ ಧಮಾಕಾ | ರೆನಾಲ್ಟ್ ಡಸ್ಟರ್ ಬೆನ್ನಲ್ಲೇ ‘ಟೆಕ್ಟಾನ್’ SUV ಎಂಟ್ರಿ.. ಫೆಬ್ರವರಿ 4ಕ್ಕೆ ಮುಹೂರ್ತ ಫಿಕ್ಸ್!



















