ಬೆಂಗಳೂರು : ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ನಡೆದಿದೆ.
ಬೆಳಗ್ಗೆಯಿಂದ ರಸ್ತೆ ಬದಿಯಲ್ಲಿ ಕಾರು ನಿಂತಿದ್ದು, ಮಲಗಿದ್ದ ವ್ಯಕ್ತಿ ಮೇಲೆಳದ ಕಾರಣ ಎಬ್ಬಿಸಲು ಸ್ಥಳೀಯರು ಮುಂದಾಗಿದ್ದಾರೆ. ಡೋರ್ ಹೊಡೆದರು ಎಚ್ಚರವಾಗದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನಲ್ಲೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮೆಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪಿರುವ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿಯ ಜೇಬಿನಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ತಾಳಹಳ್ಳಿ ದಾಖಲೆಗಳು ಪತ್ತೆಯಾಗಿವೆ. ಈ ಘಟನೆ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಪದ್ಮಶ್ರೀ ಹಾಗೂ ಖ್ಯಾತ ಪರಿಸರ ತಜ್ಞ ಮಾಧವ ಗಾಡ್ಗಿಲ್ ನಿಧನ



















