ಬೆಂಗಳೂರು: ದೇಶದ ವಿಶ್ವಾಸಾರ್ಹ ಕಂಪನಿಗಳಲ್ಲಿ ಒಂದಾಗಿರುವ ಟಾಟಾ ಗ್ರೂಪ್ ಈಗ 2025-26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಘೋಷಣೆ ಮಾಡಿದೆ. ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ ಶಿಪ್ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು, ದೇಶಾದ್ಯಂತ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅಧ್ಯಯನ ಮಾಡುತ್ತಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು (Tata Capital Pankh Scholarship Program 2025–26) ಸಲ್ಲಿಸಲು ಜನವರಿ 11 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವವರು ಭಾರತೀಯ ನಾಗರಿಕರಾಗಿರಬೇಕು. ಪ್ರಥಮ ಅಥವಾ ದ್ವಿತೀಯ ಪಿಯುಸಿಯಲ್ಲಿ ಅಧ್ಯಯನ ಮಾಡುತ್ತಿರಬೇಕು. ಕಳೆದ ಪರೀಕ್ಷೆಯಲ್ಲಿ ಶೇ.60ರಷ್ಟು ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂಪಾಯಿ ಮೀರಿರಬಾರದು. ಟಾಟಾ ಕ್ಯಾಪಿಟಲ್ ಸಂಸ್ಥೆಯ ಉದ್ಯೋಗಿಗಳು ಯೋಜನೆಯ ಲಾಭ ಪಡೆಯಲು ಆಗುವುದಿಲ್ಲ ಎಂದು ತಿಳಿಸಲಾಗಿದೆ. ಸ್ಕಾಲರ್ ಶಿಪ್ ಗೆ ಆಯ್ಕೆಯಾದವರಿಗೆ 10-15 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಅಗತ್ಯ ದಾಖಲೆಗಳು
- ಫೋಟೋ ಐಡೆಂಟಿಟಿ ಪ್ರೂಫ್
- ಪಾಸ್ ಪೋರ್ಟ್ ಗಾತ್ರದ ಫೋಟೋ
- ಆದಾಯ ಪ್ರಮಾಣಪತ್ರ
- ಕಾಲೇಜು ಪ್ರವೇಶಾತಿಗೆ ಸಂಬಂಧಿಸಿದ ದಾಖಲೆ
- ಕಾಲೇಜು ಫೀಸ್ ರಶೀದಿ
- ಬ್ಯಾಂಕ್ ಪಾಸ್ ಬುಕ್
- ಅಂಕಪಟ್ಟಿ, ಜಾತಿ ಪ್ರಮಾಣಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ https://www.buddy4study.com/ ವೆಬ್ ಸೈಟ್ ಗೆ ಭೇಟಿ ನೀಡಬೇಕು
- ಇದಾದ ಬಳಿಕ ಅಗತ್ಯ ಮಾಹಿತಿ ಒದಗಿಸಿ ಲಾಗಿನ್ ಆಗಬೇಕು
- Tata Capital Pankh Scholarship Program 2025–26 ಮೇಲೆ ಕ್ಲಿಕ್ ಮಾಡಬೇಕು
- ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು
ಇದನ್ನೂ ಓದಿ : ಮಹೀಂದ್ರಾ ಕಂಪನಿಯಿಂದ ವಿದ್ಯಾರ್ಥಿಗಳಿಗೆ 6 ಸಾವಿರ ರೂ. ವಿದ್ಯಾರ್ಥಿವೇತನ : ಹೀಗೆ ಅರ್ಜಿ ಸಲ್ಲಿಸಿ



















