ತಿರುವನಂತಪುರಂ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭಿಕ್ಷುಕನ ಬಳಿ 4 ಲಕ್ಷ ರೂ.ಗೂ ಅಧಿಕ ಹಣ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಚಾರುಮ್ಮೂಟ್ ಮತ್ತು ಆಲಪ್ಪುಳ ಬಳಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕನೊಬ್ಬನಿಗೆ ಸೋಮವಾರ ರಾತ್ರಿ ಅಪಘಾತವಾಗಿದ್ದು, ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆತನ ಬಳಿ ಇದ್ದ ಕಂಟೇನರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರಲ್ಲಿ ನಿಷೇಧಿತ 2,000 ರೂ. ನೋಟುಗಳು, ವಿದೇಶಿ ಕರೆನ್ಸಿಗಳು ಸೇರಿದಂತೆ 4.5 ಲಕ್ಷ ರೂ.ಗೂ ಹೆಚ್ಚು ಹಣ ಪತ್ತೆಯಾಗಿದೆ.
ಭಿಕ್ಷಕ ತನ್ನ ಹೆಸರು ಅನಿಲ್ ಕಿಶೋರ್ ಎಂಬುದಾಗಿ ಹೇಳಿದ್ದ. ಬಳಿಕ ಯಾವುದೇ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಕೋಗಿಲು ನಿರಾಶ್ರಿತರಿಗೆ ನಾಳೆಯೇ ಹಕ್ಕು ಪತ್ರ ವಿತರಣೆ.. ಎಷ್ಟು ಜನಕ್ಕೆ? ಸರ್ಕಾರ ಪಾಲಿಸಿದ ಮಾನದಂಡ ಏನು?



















