ಬೆಂಗಳೂರು | ಬಳ್ಳಾರಿ ಗಲಭೆ ಪ್ರಕರಣದ 25 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಜಾಮಿನು ಮಂಜೂರು ಮಾಡಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿಯ ಗನ್ ಮ್ಯಾನ್ ಗುರುಚರಣ್ ಸಿಂಗ್ ಹೊರತುಪಡಿಸಿ, ಕ್ರೈಂ ನಂಬರ್ ನಾಲ್ಕರಲ್ಲಿ ಇರುವ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಪುತ್ಥಳಿ ಉದ್ಘಾಟನಾ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಈ ವೇಳೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್‌ಗೆ ತಗುಲಿ ಸಾವನಪ್ಪಿದ್ದ ಎಂಬ ಆರೋಪ ಕೇಳಿಬಂದಿತ್ತು.
ಘಟನೆ ಸಂಬಂಧ ರಾಜ್ಯ ಸರ್ಕಾರ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿತ್ತು. ಅಲ್ಲದೆ ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ಸಹ ವರ್ಗಾವಣೆ ಮಾಡಲಾಗಿತ್ತು. ಇದೀಗ ಪ್ರಕರಣದ 25 ಆರೋಪಿಗಳಿಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ.
ಇದನ್ನೂ ಓದಿ : ಭಾರತೀಯ ಸೇನೆಯಲ್ಲಿ 95 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೆ ಸಾಕು



















