ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಇನೋವೇಷನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿಯಲ್ಲಿ (KITS Recruitment 2026) ಖಾಲಿ ಇರುವ 3 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕರ್ನಾಟಕದ ಬೆಂಗಳೂರಿನಲ್ಲಿಯೇ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎನ್ನುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ. ಆನ್ ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಇನೋವೇಷನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS)
ಹುದ್ದೆ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಒಟ್ಟು ಹುದ್ದೆ: 3
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 22
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ನೇಮಕಾತಿ ಹೊಂದಿದವರಿಗೆ ಮಾಸಿಕ 45 ಸಾವಿರ ರೂ.ನಿಂದ 5.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ, ಬಿಇ, ಬಿ.ಟೆಕ್, ಸ್ನಾತಕೋತ್ತರ ಪದವಿ ಕೋರ್ಸ್ ಪೂರ್ಣಗೊಳಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ k-tech.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 3 ಹುದ್ದೆಗಳ ನೇಮಕಾತಿ | ಈ ಕೂಡಲೇ ಅರ್ಜಿ ಸಲ್ಲಿಸಿ



















