ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕರ ಇಬ್ಬರು ಮಕ್ಕಳು ಸ್ಥಳದಲ್ಲಿ ದುರ್ಮರಣ ಹೊಂದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಈ ದುರ್ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ 8 ವರ್ಷ ಮತ್ತು 10 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಇದೇ ವೇಳೆ ಮತ್ತಿಬ್ಬರು ಬಾಲಕಿಯರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸದ್ಯ ಘಟನಾ ಸ್ಥಳಕ್ಕೆ ಅಮೀನಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೆ ಗನ್ ಹಿಡಿದು ಓಡಾಡಿದ ಭೂಪ | ಸಮಯಪ್ರಜ್ಞೆಯಿಂದ ಪ್ರಾಣ ಉಳಿಸಿಕೊಂಡ ಯುವತಿ!



















