ಬೆಂಗಳೂರು: ನಮ್ಮ ಮೆಟ್ರೋದಲ್ಲಿ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ- BMRCL) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕಂಪನಿ ಸೆಕ್ರೆಟರಿ ಹಾಗೂ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ (BMRCL Recruitment 2026) ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತರು ಅರ್ಜಿಗಳನ್ನು ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಗಳ ಹೆಸರು: ಕಂಪನಿ ಸೆಕ್ರೆಟರಿ, ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್ ಹಾಗೂ ಆಫ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 26
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಸಿಎಂಎ, ಎಲ್ ಎಲ್ ಬಿ, ಎಲ್ ಎಲ್ ಎಂ, ಡಿಗ್ರಿ, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 48 ವರ್ಷದಿಂದ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.06 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ http://bmrc.co.in/ ಗೆ ಭೇಟಿ ನೀಡಬೇಕು
ನಿಮಗೆ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ
General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560027
ಇದನ್ನೂ ಓದಿ: ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ



















