ಬೆಂಗಳೂರು : ದ್ವೇಷ ಭಾಷಣ ತಡೆ ಮಸೂದೆ, ಬಳ್ಳಾರಿ ಗಲಾಟೆ ಪ್ರಕರಣ, ಅಕ್ರಮ ವಲಸಿಗರಿಗೆ ಪುನರ್ವಸತಿ, ಕಾನೂನು ಸುವ್ಯವಸ್ಥೆ ವಿಚಾರಗಳ ಸಂಬಂಧ ರಾಜ್ಯ ಬಿಜೆಪಿ ನಿಯೋಗವು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದೆ.
ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ನಿಯೋಗದಲ್ಲಿ ಛಲವಾದಿ ನಾರಾಯಣ ಸ್ವಾಮಿ, ಗೋವಿಂದ ಕಾರಜೋಳ, ಎಸ್.ಆರ್. ವಿಶ್ವನಾಥ್, ಎನ್.ರವಿಕುಮಾರ್ ಸೇರಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ಕಾನೂನು ಸುವ್ಯವಸ್ಥೆ ವಿಚಾರ, ಬಳ್ಳಾರಿ ಪ್ರಕರಣ ಸಿಬಿಐಗೆ ವಹಿಸುವ ಬಗ್ಗೆ, ದ್ವೇಷ ಭಾಷಣ ತಡೆ ಮಸೂದೆಗೆ ಸಹಿ ಹಾಕದಂತೆ ಹಾಗೂ ಅಕ್ರಮ ವಲಸಿಗರಿಗೆ ನಿಯಮಬಾಹಿರ ಪುನರ್ವಸತಿಗೆ ಬ್ರೇಕ್ ಹಾಕುವಂತೆ ರಾಜ್ಯಪಾಲರಿಗೆ ಮನವಿ ಮತ್ತು ದೂರು ಸಲ್ಲಿಕೆ ಮಾಡಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಆಡಳಿತ ಕುಸಿದಿದೆ, ಗೂಂಡಾ ರಾಜ್ಯ, ಜಂಗಲ್ ರಾಜ್ ಆಗಿದೆ. ರಾಜ್ಯವನ್ನು ಗೂಂಡಾ ರಾಜ್ಯದಿಂದ ಕಾಪಾಡಿ ಅಂತ ಮನವಿ ಮಾಡಿದ್ದೇವೆ. ದ್ವೇಷ ಭಾಷಣ ಮಸೂದೆ ಬಗ್ಗೆ ಸರ್ಕಾರ ಸದನದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಕೈಸನ್ನೆ, ಕಣ್ಣು ಮಿಟುಕಿಸಿದ್ರೂ, ಮಾತಾಡಿದ್ರೂ ಕೇಸ್ ಹಾಕುವ ಮಸೂದೆ ಇದು. ಈ ಮಸೂದೆಗೆ ಸಹಿ ಹಾಕಬೇಡಿ ಅಂತ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : VHT 2026 | ಮುಂಬೈ ಮಣಿಸಿ ಸೆಮಿಫೈನಲ್ಗೆ ಎಂಟ್ರಿ ಕೊಟ್ಟ ಕರ್ನಾಟಕ



















