ಮಂಡ್ಯ : ನಾಗಮಂಗಲ ತಾಲೂಕು ಕಚೇರಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತು ಸಾರ್ವಜನಿಕ ದಾಖಲೆಗಳನ್ನು ತಿರುಚಿ ಸರ್ಕಾರಿ ಜಮೀನುಗಳಿಗೆ ಅನುದಾನ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ. ಈ ಸಂಬಂಧ ಸುಮೋಟೋ ಕೇಸ್ ದಾಖಲಿಸಿ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ.
ನಾಗಮಂಗಲ ತಹಶೀಲ್ದಾರ್ ಮತ್ತು ಇತರರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದ್ದು, ನ್ಯಾ ಬಿ. ವೀರಪ್ಪ ಶೋಧ ವಾರಂಟ್ ಹೊರಡಿಸಿದ್ದಾರೆ.
ನಾಗಮಂಗಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು 200 ಕೋಟಿ ಮೌಲ್ಯದ ಸರ್ಕಾರಿ ಜಮೀನಿನ ಅನುದಾನಕ್ಕೆ ನಕಲಿ ದಾಖಲೆ ಸೃಷ್ಟಿಯಾಗಿರುವುದು ಪರಿಶೀಲನೆ ವೇಳೆ ಪತ್ತೆಯಾಗಿವೆ. ಹಾಗಾಗಿ 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, 5 ಸರ್ಕಾರಿ ಅಧಿಕಾರಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ : ನಗರಸಭೆ ಪೌರಾಯುಕ್ತೆಗೆ ಪ್ರಾಣ ಬೆದರಿಕೆ | ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ದ ಭುಗಿಲೆದ್ದ ಆಕ್ರೋಶ.. ಬಂಧನಕ್ಕೆ ಆಗ್ರಹ!



















