ತಿಂಥಣಿಯ ಕಾಗಿನೆಲೆ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ | ಸಿಎಂ ಸಂತಾಪಚಿಕ್ಕಬಳಾಪುರ: ಬ್ಯಾನರ್ ವಿಚಾರವಾಗಿ ಶಿಡ್ಲಘಟ್ಟ ಪೌರಾಯುಕ್ತೆ ಶ್ರೀಮತಿ ಅಮೃತ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರಿಂದ ಜೀವಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಮಾತನಾಡಿ, ಯಾವುದೇ ಉದ್ದೇಶ ಇಟ್ಟುಕೊಂಡು ಮಾತಾಡಿಲ್ಲ, ಯಾವುದೇ ದ್ವೇಷ ಕೂಡ ಇಲ್ಲ. ನಾನು ಅಧಿಕಾರಿಯ ಜೊತೆ ಕೆಟ್ಟದಾಗಿ ಮಾತನಾಡಿಲ್ಲ. ಅಧಿಕಾರಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ.
ಕಾರ್ಯಕ್ರಮಕ್ಕೆ 9ನೇ ತಾರೀಖು ಅರ್ಜಿ ಕೊಟ್ಟಿದ್ದೇವೆ, ಆದರೆ ಏಕಾಏಕಿ ಬ್ಯಾನರ್ ತೆಗೆದು ಹಾಕಿದ್ದಾರೆ. ಅದನ್ನ ಯಾಕೆ ಎಂದು ಕೇಳಿದ್ವಿ, ಆಗ ರಸ್ತೆಗೆ ಅಡ್ಡ ಇತ್ತು ಎಂದು ಅವರು ಹೇಳಿದರು. ರಸ್ತೆಗೆ ಅಡ್ಡಲಾಗಿ ಯಾವುದೇ ಬ್ಯಾನರ್ ಹಾಕಿರಲಿಲ್ಲ. ಕಳೆದ ಬಾರಿ ಕೂಡ ಸಿಎಂ-ಡಿಸಿಎಂ ಬ್ಯಾನರ್ ಬಿಚ್ಚಿಸಿದ್ದರು. ಈಗ ಪರ್ಮಿಷನ್ ಇದ್ದರೂ ಬ್ಯಾನರ್ ತೆಗೆದಿದ್ದಾರೆ. ಅವರು ನನಗೆ ಅಕ್ಕ-ತಂಗಿ ತರಹ, ಯಾವುದೇ ಉದ್ದೇಶ ಇಟ್ಟುಕೊಂಡು ಮಾತಾಡಿಲ್ಲ ನಾನು ಆ ತರಹದ ವ್ಯಕ್ತಿಯೂ ಅಲ್ಲ, ನನ್ನಿಂದ ನೋವಾಗಿದ್ರೆ ಕ್ಷಮಿಸಿ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಇತ್ತೀಚೆಗೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ ಸಿನಿಮಾದ ಪ್ರಚಾರ ಸಭೆ ನಡೆದಿತ್ತು. ಈ ವೇಳೆ, ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಟ್ರಾಫಿಕ್ ಸಮಸ್ಯೆಗೆ ಉಂಟಾಯಿತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ ಸಿಬ್ಬಂದಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ ಕಚೇರಿಗೆ ತಂದಿಟ್ಟಿದ್ದರು.
ಈ ಬಗ್ಗೆ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ರಾಜೀವ್ ಗೌಡರ ಬೆಂಬಲಿಗ ಅಪ್ಸರ್‌ಗೆ ಪೌರಾಯುಕ್ತರು ಮಾಹಿತಿ ನೀಡಿದ್ದರು. ಆದ್ರೆ, ಫ್ಲೆಕ್ಸ್ ತೆರವುಗೊಳಿಸಿದ್ದಕ್ಕೆ ರಾಜೀವ್ ಗೌಡ ತೀವ್ರ ಆಕ್ರೋಶಗೊಂಡು ಪೌರಾಯುಕ್ತರಿಗೆ ಕರೆ ಮಾಡಿ ಜಗಳವಾಡಿದ್ದಾರೆ. ಬಾಯಿಗೆ ಬಂದ ಹಾಗೆ ಮಾತನಾಡಿದ್ದಾರೆ. “ನಮ್ಮ ಬ್ಯಾನರ್ ಬಿಚ್ಚಿಸಿದರೆ ಬೆಂಕಿ ಹಚ್ಚಿಸುವೆ. ನನ್ನ ಒಳ್ಳೆಯತನ ನೋಡಿದ್ದೀರಿ, ಕೆಟ್ಟತನ ನೋಡಿಲ್ಲ” ಎಂದು ಹರಿಹಾಯ್ದಿದ್ದಾರೆ. ಸದ್ಯ ಅಶ್ಲೀಲವಾಗಿ ಬೈದಿರುವ ರಾಜೀವ್ ಗೌಡನ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜೀವ್ ಗೌಡನ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ: ತಿಂಥಣಿಯ ಕಾಗಿನೆಲೆ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ | ಸಿಎಂ ಸಂತಾಪ



















