ಚಿಕ್ಕಮಗಳೂರು: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿರುವ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. 8ಕ್ಕೂ ಹೆಚ್ಚು ನಾಯಿಗಳನ್ನು ಈ ಚಿರತೆ ಬೇಟೆಯಾಡಿತ್ತು. ಚಿರತೆ ಸಂಚಾರದಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು.
ಜನ, ಮನೆಯಿಂದ ಹೊರಬರೋದಕ್ಕೂ ಸಹ ಹಿಂದೇಟು ಹಾಕುತ್ತಿದ್ದರು. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಆತಂಕ ಸೃಷ್ಟಿಸಿದ್ದ ಚಿರತೆ ಸೆರೆಯಿಂದ ಜನ ನಿಟ್ಟುಸಿರುಬಿಟ್ಟಿದ್ದಾರೆ.
ಇದನ್ನೂ ಓದಿ : ನ್ಯೂಜೆರ್ಸಿಯಲ್ಲಿ ತನ್ನ ಇಬ್ಬರು ಮಕ್ಕಳನ್ನು ಕೊಂದ ಭಾರತೀಯ ಮಹಿಳೆ ಬಂಧನ



















