ಚಿಕ್ಕಬಳ್ಳಾಪುರ: ಸಂಕ್ರಾಂತಿ ಹಬ್ಬದಂದೇ ಖರ್ತನಾಕ್ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯಲ್ಲಿ ನಡೆದಿದೆ.
ಇದೇ ನಗರದ ನಿವಾಸಿ ಚಂದ್ರಲೀಲಾ ಎಂಬುವರಿಗೆ ಸೇರಿದ ಮಾಂಗಲ್ಯ ಸರವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಹಾಲು ತರಲು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಹೆಲ್ಮೆಟ್ ಧರಿಸಿ, ಪಲ್ಸರ್ ಬೈಕ್‌ನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದ 50ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ ಸ್ಥಳಕ್ಕೆ ಎಎಸ್ಪಿ ಜಗನಾಥ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನಾ ಸಂಬಂಧ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ | ಕಲ್ಲು ತೂರಾಟ, ಓರ್ವನಿಗೆ ಗಾಯ



















