ಬಾಗಲಕೋಟೆ: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ ಸ್ನಾನಕ್ಕೆ ತೆರಳಿದ್ದ ಬಾಲಕರು ತಂದೆ ಕಣ್ಣೆದುರೇ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಪ್ರಾಣಬಿಟ್ಟಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಬಳಿ ನಡೆದಿದೆ.
ಮನೋಜ್(17) ಮತ್ತು ಪ್ರಮೋದ್ ಬಡಿಗೇರ(17) ಮೃತರು ಬಾಲಕರು. ಮೃತರಿಬ್ಬರು ಪ್ರಥಮ ಪಿಯುಸಿ ಓದುತ್ತಿದ್ದರು ಎನ್ನಲಾಗಿದೆ. ಮಕರ ಸಂಕ್ರಾಂತಿ ಹಬ್ಬ ಹಿನ್ನೆಲೆ ಕಾಲೇಜಿಗೆ ರಜೆ ಇದ್ದುದರಿಂದ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮುಳುಗುತ್ತಿದ್ದ ಇನ್ನೊಬ್ಬ ಬಾಲಕನನ್ನು ಸ್ಥಳೀಯ ವ್ಯಕ್ತಿ ರಕ್ಷಿಸಿದ್ದಾರೆ.
ಇಬ್ಬರು ಬಾಲಕರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢ ಪಡಿಸಿದ್ದಾರೆ. ಇಬ್ಬರು ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನಾ ಸಂಬಂಧ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.\
ಇದನ್ನೂ ಓದಿ: ಶಿವಮೊಗ್ಗ | ಎರಡನೇ ಮದುವೆಗೆ ವಿರೋಧಿಸಿದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ



















