ಬೆಂಗಳೂರು : ಭಾರತೀಯ ವಾಯುಪಡೆಯಲ್ಲಿ ಒಳ್ಳೆಯ ಸಂಬಳ ಸಿಗುವ ಉದ್ಯೋಗ ಹಿಡಿಯಬೇಕು. ಅಲ್ಲದೆ, ದೇಶಕ್ಕೆ ಸೇವೆ ಸಲ್ಲಿಸಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗ್ನಿವೀರಾಯು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಾಯುಪಡೆ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 1
ಹುದ್ದೆಯ ಹೆಸರು: ಅಗ್ನಿವೀರಾಯು
ವಿದ್ಯಾರ್ಹತೆ ಏನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 21 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ 550 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆನ್ ಲೈನ್ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iafrecruitment.edcil.co.inಗೆ ಭೇಟಿ ನೀಡಬೇಕು
ಅಗ್ನಿವೀರಾಯು ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ರೋಹಿತ್ ಶರ್ಮಾ ಭವಿಷ್ಯ ಮಸುಕು | 2027ರ ವಿಶ್ವಕಪ್ ಕನಸಿಗೆ ಪೆಟ್ಟು ನೀಡಿದ ರಾಜಕೋಟ್ ವೈಫಲ್ಯ!


















