ಉಡುಪಿ: ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಹಾಗೂ ವಾಟ್ಸಾಪ್‌ನಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. (ಭಾ.ಆ.ಸೇ) ಅವರ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆಗಳನ್ನು ಸೃಜಿಸಿ ಹಣ ವರ್ಗಾಯಿಸುವಂತೆ ಸಂದೇಶಗಳನ್ನು ರವಾನಿಸಲಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ.

ಈ ಸಂಬಂಧ ಈಗಾಗಲೇ ಸೆನ್ ಪೊಲೀಸ್ ಠಾಣೆ, ಉಡುಪಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಲಾಗಿದೆ. ಆದರೂ ಇಂತಹ ನಕಲಿ ಖಾತೆಗಳ ಮೂಲಕ ಹಣ ವರ್ಗಾವಣೆ ಅಥವಾ ಇತರೆ ಬೇಡಿಕೆಗಳ ಸಂದೇಶಗಳು ಪುನಾರಾವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಸಾರ್ವಜನಿಕರು ಹಾಗೂ ಎಲ್ಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಫೇಸ್‌ಬುಕ್ ಅಥವಾ ವಾಟ್ಸಾಪ್‌ನಲ್ಲಿ ಜಿಲ್ಲಾಧಿಕಾರಿ ಫೋಟೋ ಹಾಗೂ ಹೆಸರನ್ನು ಬಳಸಿ ಹಣ ವರ್ಗಾವಣೆ ಅಥವಾ ಯಾವುದೇ ಬೇಡಿಕೆಗಳ ಸಂದೇಶಗಳು ಬಂದಲ್ಲಿ, ಅವಕ್ಕೆ ಯಾವುದೇ ರೀತಿಯಲ್ಲಿ ಸ್ಪಂದಿಸದೆ, ಸಂದೇಶ ಸ್ವೀಕೃತವಾದ ತಕ್ಷಣವೇ ಸೆನ್ ಪೊಲೀಸ್ ಠಾಣೆಗೆ ದೂರು ನೀಡುವಂತೆ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ; ಉಡುಪಿ | ರಾತ್ರಿ ವೇಳೆ 30 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶವಾಗಿ ಬದುಕುಳಿದ ವ್ಯಕ್ತಿ!



















