ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO CABS Recruitment 2026) ಖಾಲಿ ಇರುವ 10 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆ: 10
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 22
ಡಿಆರ್ ಡಿಒದ ಸೆಂಟರ್ ಫಾರ್ ಏರ್ ಬಾರ್ನ್ ಸಿಸ್ಟಮ್ಸ್ ನಲ್ಲಿ (CABS) ಖಾಲಿ ಇರುವ 10 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿಇ, ಬಿಟೆಕ್, ಎಂಇ, ಎಂ.ಟೆಕ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 37 ಸಾವಿರ ರೂಪಾಯಿ ಸ್ಟೈಪೆಂಡ್ ಕೂಡ ನೀಡಲಾಗುತ್ತಿದೆ. ಗರಿಷ್ಠ 28 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ drdo.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯ ಸಾಫ್ಟ್ ಕಾಪಿಗಳನ್ನು jrf.rectt.cabs@gov.in ಗೆ ಮೇಲ್ ಮಾಡಬೇಕು
ಇದನ್ನೂ ಓದಿ: ಪಿಂಚಣಿದಾರರಿಗೆ ಗುಡ್ ನ್ಯೂಸ್ | ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಈ ಸೇವೆ!



















