ಉಡುಪಿ : ರಾಜ್ಯದಲ್ಲಿ ಚಿರತೆ ಕಾಟ ಹೆಚ್ಚಾಗಿದ್ದು, ಹಲವು ಕಡೆ ಚಿರತೆ ದಾಳಿಗಳಿಂದ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಅದೇ ರೀತಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ, ಕಳೆದ ಹಲವಾರು ದಿನಗಳಿಂದ ಜನಜಾನುವಾರುಗಳಿಗೆ ಕಂಟಕ ಪ್ರಾಯವಾಗಿದ್ದ ಚಿರತೆಯನ್ನ ಸೆರೆ ಹಿಡಿಯಲಾಗಿದೆ.
ಹೇರೂರು ಗ್ರಾಮದ ಚಿಕ್ತಾಡಿಯಲ್ಲಿರುವ ಸ್ಥಳೀಯರೊಬ್ಬರ ತೋಟದಲ್ಲಿ ಅರಣ್ಯ ಅಧಿಕಾರಿಗಳು ಚಿರತೆ ಬೋನನ್ನು ಇರಿಸಿದ್ದರು. ಇಂದು ಮುಂಜಾನೆ ಚಿರತೆ ಸೆರೆ ಸಿಕ್ಕಿದ್ದು, ಸದ್ಯ ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ : ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ | ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ



















