ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ (KSRLPS Recruitment 2026) ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 11 ಕ್ಲಸ್ಟರ್ ಸೂಪರ್ ವೈಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ (KSRLPS)
ಒಟ್ಟು ಹುದ್ದೆಗಳು: 11
ಹುದ್ದೆಗಳ ಹೆಸರು: ಕ್ಲಸ್ಟರ್ ಸೂಪರ್ ವೈಸರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 30
ಕರ್ನಾಟಕದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ, ಮುಳಬಾಗಿಲು, ಮಾಲೂರು, ಬಂಗಾರಪೇಟೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಎರಡು ಕ್ಲಸ್ಟರ್ ಸೂಪರ್ ವೈಸರ್, ಏಳು ಬ್ಲಾಕ್ ಮ್ಯಾನೇಜರ್, ಒಂದು ಆಫೀಸರ್ ಅಸಿಸ್ಟಂಟ್, ಒಂದು ಡಿಸ್ಟ್ರಿಕ್ಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎಸ್ಸಿ, ಎಂಎಸ್ಸಿ, ಎಂಬಿಎ ಹಾಗೂ ಎಂಕಾಂ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವವರು ksrlps.karnataka.gov.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.
ಇದನ್ನೂ ಓದಿ: ದಿನಕ್ಕೆ ಕೇವಲ 7 ರೂಪಾಯಿ ಉಳಿಸಿ, ತಿಂಗಳಿಗೆ 5 ಸಾವಿರ ರೂಪಾಯಿ ಪೆನ್ಶನ್ ಪಡೆಯಿರಿ | ಏನಿದು ಸ್ಕೀಮ್?


















