ಗದಗ : ಎರಡನೇ ದಿನವೂ ಲಕ್ಕುಂಡಿಯ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಉತ್ಖನನ ಕಾರ್ಯ ನಡೆಯುತ್ತಿದ್ದು, ಪ್ರಾಚೀನ ಕಾಲದ ಶಿಲಾಕೃತಿ ಒಂದು ಪತ್ತೆಯಾಗಿದೆ.
ಇದು ದೇವಸ್ಥಾನಕ್ಕೆ ಸಂಬಂಧಿಸಿದ ಕುರುಹು ಆಗಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರಾಚೀನ ಶಿಲೆ ಪತ್ತೆಯಿಂದ ಸ್ಥಳೀಯರಲ್ಲಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
ಒಂದೂವರೆ ಅಡಿ ತೆಗೆಯುತ್ತಿದ್ದಂತೆ ಈ ಶಿಲಾಕೃತಿ ಸಿಕ್ಕಿದೆ. ಪುರಾತತ್ವ ಇಲಾಖೆ ತಜ್ಞರು ಶಿಲಾಕೃತಿಯನ್ನು ಪರಿಶೀಲಿಸುತ್ತಿದ್ದು, ಶೀಘ್ರವೇ ಎಷ್ಟು ವರ್ಷ ಹಿಂದಿನದ್ದು ಎನ್ನುವುದು ತಿಳಿಯಲಿದೆ.
10 ಮೀಟರ್ ಸುತ್ತಳತೆ ಜಾಗದಲ್ಲಿ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಉತ್ಖನನ ಕಾರ್ಯ ಮುಗಿಯುವವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಆದೇಶ ಪ್ರಕಟಿಸಿದ್ದಾರೆ. ಪುರಾತತ್ವ ಇಲಾಖೆಯ ಶಿಫಾರಸ್ಸಿನ ಮೇರೆಗೆ ಉತ್ಖನನ ಜಾಗವನ್ನ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಉತ್ಖನನ ಕೆಲಸಕ್ಕೆ ತೊಂದರೆಯಾಗದೇ ಇರಲು ಸಾರ್ವಜನಿಕರ ಫೋಟೋ, ವೀಡಿಯೋಗ್ರಾಫಿಗೆ ನಿಷೇಧ ಹೇರಲಾಗಿದೆ.
ಇದನ್ನೂ ಓದಿ : ಮಾಜಿ ಸಚಿವ ರಾಜುಗೌಡ ಕಾರು ಅಪಘಾತ | CCL ಪಂದ್ಯ ಮುಗಿಸಿ ಬರುವಾಗ ದುರಂತ!



















