ಬೆಂಗಳೂರು: ಹಿಟ್ ಆ್ಯಂಡ್ ರನ್‌ಗೆ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ಬೈಕ್ ಸವಾರ ತೌಸಿಫ್ ಸೇರಿ ಮೂವರು ಸವಾರರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ರಾಜ್ಯ ಹೆದ್ದಾರಿಯಲ್ಲಿ ಬೈಕಿಗೆ ಡಿಕ್ಕಿ ಹೊಡಿಸಿ ಟಿಪ್ಪರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಸವಾರರು ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್, ಬೈಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಮೂವರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಲಕ್ಕುಂಡಿಯಲ್ಲಿ ಎರಡನೇ ದಿನಕ್ಕೆ ಕಾಲಿಟ್ಟ ಉತ್ಖನನ ಕಾರ್ಯ | ಪ್ರಾಚೀನ ಕಾಲದ ಶಿಲಾಕೃತಿ ಪತ್ತೆ!


















