ಕೋಲಾರ : ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ. ದುರಾದೃಷ್ಟಾವಶಾತ್ ಈ ದುರಂತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವನ್ನಪ್ಪಿರುವ ಘಟನೆ ಕೋಲಾರದ ಹೊರವಲಯದ ಬಸವನತ್ತ ಬಳಿ ನಡೆದಿದೆ.
ಟೊಯೋಟಾ ಕ್ವಾಲೀಸ್ ಕಾರಿನಲ್ಲಿ ಶ್ರೀವತ್ಸ, ನಾಗೇಂದ್ರ, ದಿತ್ಯಾ, ಸ್ಪೂರ್ತಿ, ಸುಕೃತ್, ಸುಮಂತ್ ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದಾವಿಸಿ ಅಪಘಾತಕ್ಕೀಡಾದವರನ್ನು ರಕ್ಷಿಸಿದ್ದು, ನಾಗೇಂದ್ರ (35) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸದ್ಯ ಉಳಿದ ಗಾಯಾಳುಗಳಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣವು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪಾಪಿ ಪತಿ



















