ಬೆಂಗಳೂರು: ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶದ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಭಾರತೀಯ ಸೇನೆಯಲ್ಲಿ (Indian Army Recruitment 2026) ಖಾಲಿ ಇರುವ 379 ಶಾರ್ಟ್ ಸರ್ವಿಸ್ ಕಮಿಷನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಹಾಗೂ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸೇನೆ
ಹುದ್ದೆ ಹೆಸರು: ಶಾರ್ಟ್ ಸರ್ವಿಸ್ ಕಮಿಷನ್
ಒಟ್ಟು ಹುದ್ದೆ: 379
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 5
ಅರ್ಜಿ ಸಲ್ಲಿಕೆಯ ವಿಧಾನ: ಆಫ್ ಲೈನ್, ಆನ್ ಲೈನ್
ಲೆಫ್ಟಿನೆಂಟ್, ಕ್ಯಾಪ್ಟನ್, ಮೇಜರ್, ಲೆಫ್ಟಿನೆಂಟ್ ಕರ್ನಲ್, ಬ್ರಿಗೇಡಿಯರ್, ಮೇಜರ್ ಜನರಲ್ ಸೇರ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಎಂಎಸ್ಸಿ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 20ರಿಂದ ಗರಿಷ್ಠ 27 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 2.5 ಲಕ್ಷ ರೂಪಾಯಿವರೆಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು joinindianarmy.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಳಾಸ
Rtg ‘A'(TGC) section, Dte Gen of Rtg, AG’s Branch, Integrated HQ, Ministry of Defence (Army), West Block-III, R K Puram, New Delhi-110066.
ಇದನ್ನೂ ಓದಿ: LIC ಪಾಲಿಸಿದಾರರಿಗೆ ಗುಡ್ ನ್ಯೂಸ್ | ನಿಮಗೆ ಸಿಗಲಿದೆ ಭರ್ಜರಿ 30% ರಿಯಾಯಿತಿ



















