ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯ ‘ಕಾಮಕಾಂಡ’ ಈಗ ಇಡೀ ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿದೆ. ಹೌದು.. ಐಪಿಎಸ್ ಅಧಿಕಾರಿ ಡಿಜಿಪಿ ರಾಮಚಂದ್ರರಾವ್ ರಾಸಲೀಲೆಯಲ್ಲಿ ತೊಡಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿ ಎಲ್ಲೆಡೆ ಹಲ್‌ಚಲ್ ಎಬ್ಬಿಸುತ್ತಿದೆ
ರಾಮಚಂದ್ರರಾವ್ ಅವರು ತನ್ನ ಕಚೇರಿಯಲ್ಲಿ ಸಿವಿಲ್ ಡ್ರೆಸ್‌ನಲ್ಲಿರುವಾಗಲೇ ಮಹಿಳೆಯರನ್ನು ಅಪ್ಪಿಕೊಂಡು ಮುತ್ತಿಡುವ ಹಸಿಬಿಸಿ ದೃಶ್ಯ ವಿಡಿಯೋದಲ್ಲಿ ರೆಕಾರ್ಡ್ ಆಗಿದ್ದು, ಡಿಜಿಪಿಯ ʻನಾಟಿʼತನ ಜಗಜ್ಜಾಹೀರಾಗಿದೆ.
ಇತ್ತೀಚೆಗೆ ಚಿನ್ನ ಸ್ಮಗ್ಲಿಂಗ್ ಕೇಸ್‌ನಲ್ಲಿ ತಗ್ಲಾಕ್ಕೊಂಡಿದ್ದ ರನ್ಯಾ ರಾವ್ ಅವರ ಮಲ ತಂದೆಯಾಗಿರುವ ಡಿಜಿಪಿ ಡಾ.ರಾಮಚಂದ್ರರಾವ್, ಸರಸವಾಡಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಪ್ರಕರಣ ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ ತಂದಿದ್ದು, ವಿಡಿಯೋಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಳ ತಲುಪಿವೆ. ಈ ಬಗ್ಗೆ ಮಾಹಿತಿ ಪಡೆದ ಸಿಎಂ, ಅಧಿಕಾರಿಯ ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಮವಸ್ತ್ರದ ಘನತೆ ಮರೆತು, ಕಚೇರಿಯಲ್ಲೇ ಇಂತಹ ಕೃತ್ಯವೆಸಗಿರುವುದು ಅಕ್ಷಮ್ಯ ಎಂದು ಸಿಎಂ ಕೆಂಡಾಮಂಡಲವಾಗಿದ್ದು, ಕೂಡಲೇ ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಇಂದೋರ್‌ನಲ್ಲಿ ‘ಕಿಂಗ್’ ಕೊಹ್ಲಿ ಐತಿಹಾಸಿಕ ದಾಖಲೆ | ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಪತನ!



















