ಕಲಬುರಗಿ : ಹುಬ್ಬಳ್ಳಿಯಲ್ಲಿ ಮಾನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಕಲಬುರಗಿಯ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ.
ಮಾನ್ಯಳ ಹತ್ಯೆ ಮಾಡಿದ ಹಂತಕರನ್ನು ಬಂಧಿಸಿ 1 ಕೋಟಿ ರೂ. ಪರಿಹಾರ ಕೊಡಿ, ಸರ್ಕಾರಿ ನೌಕರಿ ನೀಡಿ ಎಂದು ಆಗ್ರಹಿಸಿದ್ದಾರೆ.
ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆದಿದ್ದು, ‘ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ ಇದಕ್ಕೆಲ್ಲ ನ್ಯಾಯ ಒದಗಿಸಿ’ ಎಂದು ಬಿಜೆಪಿ ಎಸ್ಸಿ ಮೋರ್ಚಾ ಕಿಡಿಕಾರಿದ್ದಾರೆ.
ಇದನ್ನೂ ಓದಿ : ಅಬಕಾರಿ ಇಲಾಖೆಯಲ್ಲಿನ ಲಂಚಾವತಾರ ಪ್ರಕರಣ | ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದ ಸಚಿವ ಆರ್.ಬಿ.ತಿಮ್ಮಾಪುರ



















