ಬೆಂಗಳೂರು: ನೀವು ಬೆಂಗಳೂರಿನಲ್ಲೇ ಒಳ್ಳೆಯ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ಸಂಸ್ಥೆಯಲ್ಲಿ (K-RIDE Recruitment 2026) ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 9 ಜನರಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ (K-RIDE)
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್ ಇತ್ಯಾದಿ
ಹುದ್ದೆಗಳ ಸಂಖ್ಯೆ: 9
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 16
ಜನರಲ್ ಮ್ಯಾನೇಜರ್, ಜಾಯಿಂಟ್ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಜಿನಿಯರಿಂಗ್, ಎಂಟೆಕ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 55 ವರ್ಷಗಳ ವಯೋಮಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ https://kride.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ: ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 572 ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸಂಬಳ



















