ಮಂಡ್ಯ : ಮನ್ರೇಗಾ ಯೋಜನೆಯ ಹೆಸರು ಬದಲಾವಣೆ ಖಂಡಿಸಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ನಗರದ ಸಂಜಯ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮಹಿಳಾ ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಮನ್ರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಮನ್ರೇಗಾ ಯೋಜನೆಯ ಹೆಸರು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಮನ್ರೇಗಾ ಹೆಸರು ಬದಲಾವಣೆ ಹಿಂಪಡೆಯದಿದ್ದರೆ, ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ | ರಾಷ್ಟ್ರಗೀತೆಗೆ ಅವಮಾನ ಆರೋಪಿಸಿ ಅರ್ಧಕ್ಕೇ ಹೊರನಡೆದ ರಾಜ್ಯಪಾಲ



















