ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಘಟಾನುಘಟಿ ನಾಯಕರ ಹೆಸರು ಕೇಳಿಬಂದಿದ್ದವು. ಆದ್ರೆ, ಅಂತಿಮವಾಗಇಂದು (ಜ.20) ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಈಶ್ವರ್ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧ್ಯಕ್ಷ ಎನಿಸಿಕೊಂಡಿದ್ದಾರೆ.
ಈ ಹಿಂದೆ ಈಶ್ವರ್ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ಕೂಡ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಗೆ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿದ್ದರು. ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಈಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಕೂಡ ಕೇಳಿ ಬಂದಿತ್ತು. ಲಿಂಗಾಯತ ಪಂಚಪೀಠದ ಪೀಠಾಧಿಪತಿಗಳೊಬ್ಬರು ಯಡಿಯೂರಪ್ಪ ಅವರು ವೀರಶೈವ ಮಹಾಸಭಾದ ಅಧ್ಯಕ್ಷರಾದರೇ, ಸಂತೋಷ ಎಂದು ಸಹ ಬಹಿರಂಗವಾಗಿಯೇ ಹೇಳಿದ್ದರು. ಆದ್ರೆ, ಈಗ ಕೊನೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಭಾಲ್ಕಿ ಕ್ಷೇತ್ರದ ಶಾಸಕ, ರಾಜ್ಯದ ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ : ಯರ್ರಾಬಿರ್ರಿ ಡ್ರೈವಿಂಗ್ ಮಾಡಿದ ತಮಿಳುನಾಡು ಬಸ್ ಡ್ರೈವರ್‌ಗೆ ಗ್ರಹಚಾರ ಬಿಡಿಸಿದ ಬೆಂಗಳೂರು ಮಹಿಳೆ



















