ಬೆಂಗಳೂರು: ನೀವು ಈಗಷ್ಟೇ ಎಂಬಿಎ ಕೋರ್ಸ್ ಮುಗಿಸಿದ್ದೀರಾ? ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಎಕ್ಸಿಮ್ ಬ್ಯಾಂಕಿನಲ್ಲಿ ಖಾಲಿ ಇರುವ (Exim Bank Recruitment 2026) 60 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜ್ ಮೆಂಟ್ ಟ್ರೈನಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಎಕ್ಸಿಮ್ ಬ್ಯಾಂಕ್
ಹುದ್ದೆಗಳ ಹೆಸರು: ಮ್ಯಾನೇಜ್ ಮೆಂಟ್ ಟ್ರೈನಿ ಇತ್ಯಾದಿ
ಹುದ್ದೆಗಳ ಸಂಖ್ಯೆ: 60
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 15
40 ಮ್ಯಾನೇಜ್ ಮೆಂಟ್ ಟ್ರೈನಿ ಹಾಗೂ 20 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 85 ಸವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಎ, ಸ್ನಾತಕೋತ್ತರ ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿ ಇದೆ.
ಜನರಲ್, ಒಬಿಸಿ ಅಭ್ಯರ್ಥಿಗಳಿಗೆ 600 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಮಹಿಳಾ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ eximbankindia.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ | ಬಿಇ ಮುಗಿಸಿದವರಿಗೆ ಚಾನ್ಸ್



















