ಬೆಳಗಾವಿ : ಗೋಲ್ಡ್‌ನಂತೆಯೇ ಗಲ್ಫ್ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್ ಸ್ಮಗ್ಲಿಂಗ್ ಮಾಡ್ತಿದ್ದ ಅಕ್ರಮ ಜಾಲವೊಂದು ಸಿಕ್ಕಿಬಿದ್ದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೋಟಿ ಕೋಟಿ ತೆರಿಗೆ ವಂಚಿಸುತ್ತಿದ್ದ ಖದೀಮರು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಬೆಳಗಾವಿ ಪೊಲೀಸರು, ಅಕ್ರಮ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಟ್ಯಾಂಕರ್‌ನಲ್ಲಿ ತೈಲ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಾಳಮಾರುತಿನಗರ ಪೊಲೀಸರ ತಂಡ, ಇನ್ಸ್‌ಪೆಕ್ಟರ್ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆಸಿದೆ. ದಾಳಿ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಪೆಟ್ರೋಲಿಯಂ ಉತ್ಪನ್ನಗಳು ಸಾಗಿಸುತ್ತಿದ್ದದ್ದು, ಬೆಳಕಿಗೆ ಬಂದಿದೆ. ಕೂಡಲೇ 17 ಲಕ್ಷ ರೂ. ಮೌಲ್ಯದ 17,000 ಲೀಟರ್ ಡೀಸೆಲ್ ಮತ್ತು ಟ್ಯಾಂಕರ್ ಅನ್ನು ಜಪ್ತಿ ಮಾಡಲಾಗಿದೆ.
ಇನ್ನೂ ತುಮಕೂರು ಮೂಲದ ಟ್ಯಾಂಕರ್ ಮಾಲೀಕ ಅರಿಹಂತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಲ್ಫ್ ರಾಷ್ಟ್ರಗಳಿಂದ ಅಕ್ರಮವಾಗಿ ತೈಲ ಸಾಗಾಟ ಮಾಡುತ್ತಿದ್ದದ್ದು ಗೊತ್ತಾಗಿದೆ. ವಿಚಾರಣೆ ವೇಳೆ ಸ್ಮಗ್ಲಿಂಗ್ ಜಾಲದಲ್ಲಿ ಮಹಾರಾಷ್ಟ್ರ, ರಾಜಸ್ಥಾನದವರು ಇರುವುದಾಗಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಮಗ್ಲರ್‌ಗಳ ಪತ್ತೆಗಾಗಿ ಬಲೆಬೀಸಿದ್ದಾರೆ.
ಇದನ್ನೂ ಓದಿ : ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್!



















