ಬೆಂಗಳೂರು: ಪದವಿ, ಎಂಬಿಬಿಎಸ್ ಮುಗಿಸಿ, ವೈದ್ಯರಾಗಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Chikkaballapur Recruitment 2026) ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜಿಡಿಎಂಒ ಹಾಗೂ ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ
ಹುದ್ದೆ ಹೆಸರು: ಜಿಡಿಎಂಒ ಹಾಗೂ ಸ್ಪೆಷಲಿಸ್ಟ್ ಡಾಕ್ಟರ್
ಒಟ್ಟು ಹುದ್ದೆ: 14
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ, ಕರ್ನಾಟಕ
ಸಂದರ್ಶನದ ದಿನಾಂಕ: ಜನವರಿ 23
ರೇಡಿಯೋಲಾಜಿಸ್ಟ್, ಆರ್ಥೋಪಿಡಿಶಿಯನ್, ಗೈನಾಕಲಜಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ chikkaballapur.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
The District Health and Family Welfare Officer Chikkaballapur
ಇದನ್ನೂ ಓದಿ : ಕೇಂದ್ರ ಸರ್ಕಾರದ MRPL ಸಂಸ್ಥೆಯಲ್ಲಿ ನೇಮಕಾತಿ | ಹುಬ್ಬಳ್ಳಿಯಲ್ಲಿ ಉದ್ಯೋಗ


















