ಬೆಂಗಳೂರು: ಬಿಎಸ್ಸಿ, ಜಿಎನ್ಎಂ ಕೋರ್ಸ ಮುಗಿಸಿ, ಬೆಂಗಳೂರಿನಲ್ಲಿಯೇ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Bangalore Recruitment 2026) ಖಾಲಿ ಇರುವ 55 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು
ಹುದ್ದೆ ಹೆಸರು: ನರ್ಸಿಂಗ್ ಆಫೀಸರ್
ಒಟ್ಟು ಹುದ್ದೆ: 55
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಸಂದರ್ಶನದ ದಿನಾಂಕ: ಮಾರ್ಚ್ 16
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಸ್ಸಿ ಅಥವಾ ಜಿಎನ್ಎಂ ಕೋರ್ಸ್ ಗಳನ್ನು ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 18,174 ರೂಪಾಯಿ ಸಂಬಳ ನೀಡಲಾಗುತ್ತದೆ. ಮೊದಲು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಖು. ಇದಾದ ಬಳಿಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುತ್ತದೆ. ಸಂದರ್ಶನದ ದಿನಾಂಕಗಳು ಹೀಗಿವೆ- 27-01-2026, 02-02-2026, 09-02-2026, 16-02-2026, 23-02-2026, 02-03-2026, 09-03-2026, 16-03-2026.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ bengaluruurban.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
The District RCH Officers’ Office, District Health and Family Welfare Officers’ Office Premises, Old TB Hospital, Old Madras Road, Near Swami Vivekananda Metro Station, Indiranagar, Bengaluru-38
ಇದನ್ನೂ ಓದಿ : ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ


















