ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು, ಒಳ್ಳೆಯ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India Recruitment 2026) ಖಾಲಿ ಇರುವ 350 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 350 ಮಾರ್ಕೆಟಿಂಗ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 350
ಹುದ್ದೆಗಳ ಹೆಸರು: ಮಾರ್ಕೆಟಿಂಗ್ ಆಫೀಸರ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 03
300 ಮಾರ್ಕೆಟಿಂಗ್ ಆಫೀಸರ್ ಹಾಗೂ 50 ಫಾರಿನ್ ಎಕ್ಸ್ ಚೇಂಜ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಎಂಬಿಎ, ಪಿಜಿಡಿಎಂ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ.
ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನಕ್ಕೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.05 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ centralbankofindia.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 55 ನರ್ಸಿಂಗ್ ಆಫೀಸರ್ ಗಳ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ


















