ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (Bengaluru West Municipal Corporation Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಲೀಗಲ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ
ಹುದ್ದೆ ಹೆಸರು: ಲೀಗಲ್ ಅಸಿಸ್ಟಂಟ್
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 20
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಕಾನೂನು ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಲ್ಲಿ ಒಂದಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bbmp.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
To The Commissioner, Bangalore West Municipal Corporation, 16th Cross, Malleshwaram, Bangalore-560003
ಇದನ್ನೂ ಓದಿ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 350 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸಂಬಳ


















