ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ 10 ಮಂದಿ ಸೈನಿಕರು ಸಾವನ್ನಪ್ಪಿದ್ದು, 9 ಮಂದಿಗೆ ಗಂಭಿರ ಗಾಯವಾಗಿರುವ ಘಟನೆ ವರದಿಯಾಗಿದೆ. ವಾಹನವು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಭದೇರ್ವಾ-ಚಂಬಾ ಅಂತಾರಾಜ್ಯ ರಸ್ತೆಯ ಖನ್ನಿ ಟಾಪ್‌ನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ ಮತ್ತು ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಿದಾಗ ನಾಲ್ವರು ಸೈನಿಕರು ಮೃತಪಟ್ಟಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡಿದ್ದ ಇತರ ಒಂಬತ್ತು ಸೈನಿಕರನ್ನು ರಕ್ಷಿಸಲಾಗಿದೆ ಮತ್ತು ಅವರಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ವಿಶೇಷ ಚಿಕಿತ್ಸೆಗಾಗಿ ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ; ಫರೀದಾಬಾದ್‌ನ ‘ಸೈಕೋ ಕಿಲ್ಲರ್’ ಸಿಂಗ್ ರಾಜ್‌ಗೆ ಜೀವಾವಧಿ ಶಿಕ್ಷೆ



















