ಉಡುಪಿ: ಬಾವಿಗೆ ಬಿದ್ದು ಮೂರು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾರಾಯಣಶೆಟ್ಟಿಯವರ ತೋಟದಲ್ಲಿನ ಬಾವಿಯಲ್ಲಿ ಚಿರತೆ ಬಿದ್ದಿದ್ದು, ಮನೆಯ ಬಾವಿಯ ಬಳಿ ತೆರಳಿದಾಗ ಚಿರತೆಯ ಮೃತದೇಹ ಪತ್ತೆಯಾಗಿದೆ. ಬಳಿಕ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ನಾಯಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಚಿರತೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಚಿರತೆ ಎರಡು–ಮೂರು ದಿನಗಳ ಹಿಂದೆಯೇ ಬಾವಿಗೆ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ.
ಈ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಚಿರತೆಯ ಶವವನ್ನು ಮೇಲಕ್ಕೆತ್ತಿ ವೈದ್ಯಾಧಿಕಾರಿಗಳಿಂದ ಪರೀಕ್ಷೆ ನಡೆಸಿದರು.
ಪರಿಶೀಲನೆ ಬಳಿಕ ಅರಣ್ಯ ಇಲಾಖೆಯವರು ನಿಯಮಾನುಸಾರ ಚಿರತೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ.
ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚಾದ ಪುಂಡರ ಹಾವಳಿ | ಬೈಕ್ ನಂಬರ್ ಪ್ಲೇಟ್ ಕಳಚಿ ಗುಂಪು ಗುಂಪಾಗಿ ಬಂದು ವ್ಹೀಲಿಂಗ್



















