ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಲಾಯಿತು. ಜೆಡಿಎಸ್ ಮುಖಂಡ ಕೆ.ಪಿ. ರಾಜು ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಕೇಕ್ ಕತ್ತರಿಸಿ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
ನಿಖಿಲ್ ಕುಮಾರಸ್ವಾಮಿ ಅವರ ಆಗಮನದ ವೇಳೆ ಶಾಲಾ ಮಕ್ಕಳು ಡಾ. ರಾಜಕುಮಾರ್ ಅವರ ಹಾಡಿಗೆ ನೃತ್ಯ ಪ್ರದರ್ಶಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಮಕ್ಕಳ ನೃತ್ಯ ಪ್ರದರ್ಶನವನ್ನು ನೋಡಿ ನಿಖಿಲ್ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮವು ಉತ್ಸಾಹ, ಸಂಭ್ರಮ ಹಾಗೂ ಶಿಸ್ತುಬದ್ಧವಾಗಿ ನಡೆಯಿತು. ಜೆಡಿಎಸ್ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯ ನಾಗರಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ : 2ನೇ ವರ್ಷದ ‘ಬೈಂದೂರು ಉತ್ಸವ’ಕ್ಕೆ ವೇದಿಕೆ ಸಜ್ಜು | ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆಯಲ್ಲಿ ನಡೆಯಲಿದೆ 3 ದಿನಗಳ ಮಹಾ ಸಂಭ್ರಮ



















