ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಮೂರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IIAP Recruitment 2026) ಹೊರಡಿಸಲಾಗಿದೆ. ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಬೆಂಗಳೂರಿನಲ್ಲಿಯೇ ಉತ್ತಮ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
ಹುದ್ದೆ ಹೆಸರು: ಎಂಜಿನಿಯರ್
ಒಟ್ಟು ಹುದ್ದೆಗಳು: 03
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಫೆಬ್ರವರಿ 10
ಡಿಸೈನ್ ಆ್ಯಂಡ್ ಅನಾಲಿಸಿಸ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 95 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ iiap.res.in ಗೆ ಭೇಟಿ ನೀಡಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ನಮೂದಿಸಿದ ದಾಖಲೆಗಳೊಂದಿಗೆ IIA Campus, 2nd Block, Koramangala, Sarjapur Road, Bengaluru – 560034 ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 30 ಸಾವಿರ ರೂ. ಸಂಬಳ



















