ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ (CFTRI Recruitment 2026) ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಒಂದು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮೈಸೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 26
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ cftri.res.in ವೆಬ್ ಸೈಟ್ ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಓದಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಕೆ ಮಾಡಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 28 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದ IIAP ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ



















