ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 11 ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡೈರೆಕ್ಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (Income Tax Department Recruitment 2026) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು: ಡೈರೆಕ್ಟರ್ ಇತ್ಯಾದಿ
ಒಟ್ಟು ಹುದ್ದೆಗಳು: 11
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 10
ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಕೆಲಸ ಮಾಡಲು ಸಿದ್ಧರಿರುವವರು ಅರ್ಜಿ ಸಲ್ಲಿಸಬಹುದು. 2 ಡೈರೆಕ್ಟರ್, 5 ಅಡಿಷನಲ್ ಡೈರೆಕ್ಟರ್ ಹಾಗೂ 4 ಡೆಪ್ಯೂಟಿ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಬಿಇ, ಬಿ.ಟೆಕ್, ಪದವಿ, ಡಿಪ್ಲೋಮಾ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 39 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ incometaxmumbai.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಅದನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಮೇತ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Directorate of Income Tax (Systems), Central Board of Direct Taxes, Ground Floor, E2, ARA Center, Jhandewalan Ext., New Delhi – 110 055
ಇದನ್ನೂ ಓದಿ : ಕೇಂದ್ರ ಸರ್ಕಾರದ IIAP ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ



















