ಬೆಂಗಳೂರು:ರಾಜ್ಯ ಸರ್ಕಾರ ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ನಡೆಸುವ ನಿಟ್ಟಿನಲ್ಲಿ ವಾರ್ಡ್‌ವಾರು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ 12 ದಿನಗಳ ಕಾಲ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ಈ ಅವಧಿಯಲ್ಲಿ ಆನ್‌ಲೈನ್ ಹಾಗೂ ನಗರಾಭಿವೃದ್ಧಿ ಇಲಾಖೆಗೆ ನೇರವಾಗಿ ಸಲ್ಲಿಸಿದ ಅರ್ಜಿಗಳ ಮೂಲಕ ಇದುವರೆಗೆ 700ಕ್ಕೂ ಹೆಚ್ಚು ಆಕ್ಷೇಪಣೆಗಳು ದಾಖಲಾಗಿವೆ.
ಆಕ್ಷೇಪಣೆಗಳಲ್ಲಿನ ಪ್ರಮುಖ ಅಂಶವಾಗಿ, ವಾರ್ಡ್ ಮೀಸಲಾತಿ ಹಂಚಿಕೆಯಲ್ಲಿ ಸ್ಥಳೀಯ ಜಾತಿ ಆಧಾರಕ್ಕೆ ಸೂಕ್ತ ಮಹತ್ವ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ಸರ್ಕಾರ ನಿಗದಿಪಡಿಸಿದಂತೆ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.
ಒಟ್ಟು 185 ವಾರ್ಡ್‌ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕಾಗಿದ್ದರೂ, ಕೇವಲ 176 ವಾರ್ಡ್‌ಗಳಿಗೆ ಮಾತ್ರ ಮಹಿಳಾ ಮೀಸಲಾತಿ ಘೋಷಿಸಲಾಗಿದೆ. ಉಳಿದ 9 ವಾರ್ಡ್‌ಗಳಲ್ಲಿಯೂ ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕು ಎಂಬ ಆಗ್ರಹ ಆಕ್ಷೇಪಣೆಗಳಲ್ಲಿ ಉಲ್ಲೇಖವಾಗಿದೆ. ಇದಲ್ಲದೆ, ಕೆಲ ವಾರ್ಡ್‌ಗಳಲ್ಲಿ ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂಬ ದೂರು ದಾಖಲಾಗಿದೆ.
ಈಗಾಗಲೇ ಬಂದಿರುವ ಎಲ್ಲಾ ಅರ್ಜಿಗಳ ಪರಿಶೀಲನೆ ಪ್ರಕ್ರಿಯೆ ಕೈಗೊಂಡಿರುವ ನಗರಾಭಿವೃದ್ಧಿ ಇಲಾಖೆ, ಶೀಘ್ರದಲ್ಲೇ ಅಂತಿಮ ವಾರ್ಡ್ ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ : ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!



















