ರಾಯಚೂರು: ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ.
ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಮೃತ ಕಂದಮ್ಮ. ಸಾರಿಗೆ ಬಸ್ ಗೂಗಲ್‌ನಿಂದ ದೇವದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಚಾನಕ್ಕಾಗಿ ಅಡ್ಡ ಬಂದ ಕಾರಣ ಮಗುವಿನ ಮೇಲೆ ಬಸ್ ಹರಿದು ಈ ದುರ್ಘಟನೆ ಸಂಭವಿಸಿದೆ.
ಬಸ್ ಬರುವುದನ್ನು ಗಮನಿಸದೆ ಮಗು ರಸ್ತೆ ದಾಟಲು ಮುಂದಾದಾಗ ಅಪಘಾತ ನಡೆದಿದೆ ಎನ್ನಲಾಗುತ್ತಿದೆ. ಧಿಡೀರ್ ಆಗಿ ಅಡ್ಡ ಬಂದ ಕಾರಣ ಬಸ್ಸಿನ ಚಕ್ರದಡಿಗೆ ಸಿಲುಕಿ ಮಗು ಮೃತಪಟ್ಟಿದೆ. ಸದ್ಯ ಈ ಘಟನೆ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ



















