ಬೆಂಗಳೂರು: ಕೇಂದ್ರ ಸರ್ಕಾರವು ದೇಶದ ಐಟಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ದಿಸೆಯಲ್ಲಿ ಸ್ಥಾಪಿಸಲಾದ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI)
ಒಟ್ಟು ಹುದ್ದೆಗಳು: 01
ಹುದ್ದೆಗಳ ಹೆಸರು: ಚೀಫ್ ಎಕ್ಸಿಕ್ಯೂಟಿವ್ ಆಫೀಸರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 29
ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ stpi.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು - ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು
ಇದನ್ನೂ ಓದಿ: ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಸಂಸ್ಥೆಯಲ್ಲಿ ನರ್ಸ್ ಹುದ್ದೆ ಖಾಲಿ | ಹೀಗೆ ಅರ್ಜಿ ಸಲ್ಲಿಸಿ


















