ಮೈಸೂರು : ಮೈಸೂರಿನ ದಿವಾನ್ ರಸ್ತೆಯಲ್ಲಿರುವ ಸಂಕಲ್ಪ ಎನ್‌ಕ್ಲೇವ್ ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುವ ವೇಳೆ ಕೆಳಗೆ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದ ಸತೀಶ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಸತೀಶ್ (47) ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದು, ವೃತ್ತಿಯಿಂದ ಪೇಂಟರ್ ಆಗಿದ್ದರು.
ಈ ದುರ್ಘಟನೆಯ ದೃಶ್ಯಗಳು ಅಪಾರ್ಟ್‌ಮೆಂಟ್‌ನ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಬಣ್ಣ ಹಚ್ಚುವ ಕೆಲಸಕ್ಕೆ ಸತೀಶ್ ಅವರನ್ನು ಕರೆದೊಯ್ದಿದ್ದ ಕಂಟ್ರಾಕ್ಟರ್ ದೀಪಕ್ ಅವರ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ನಡೆದಿದೆ ಎಂದು ಆರೋಪಗಳು ಕೇಳಿಬಂದಿವೆ. ಘಟನಾ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ | ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR



















