ಉಡುಪಿ : ಕಾರ್ಕಳ ಮೀಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ತೂಫಾನ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕೆಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ಪಡೆದ ಕಾರ್ಕಳ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಶಿವಮೊಗ್ಗ | ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿತ ; ಆಂತಕಗೊಂಡ ವಾಹನ ಸವಾರರು



















