ಬೆಂಗಳೂರು: ಕೆಲಸ ಬಿಡುತ್ತೇನೆ ಎಂದಿದ್ದಕ್ಕೆ ಬಟ್ಟೆ ಬಿಚ್ಚಿ ಹೊಡಿತೀನಿ ಎಂದು ಸೈಬರ್ ಸೆಂಟರ್ ಮಾಲೀಕನೊಬ್ಬ ಯುವತಿಗೆ ಅಶ್ಲೀಲವಾಗಿ ನಿಂದನೆ ಮಾಡಿರುವ ಘಟನೆ ನಗರದ ಕೆಂಗೇರಿಯಲ್ಲಿ ನಡೆದಿದೆ.
ಸೈಯದ್ ಎಂಬಾತ ಕೆಂಗೇರಿಯಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ. ಕಳೆದ ಐದು ವರ್ಷಗಳಿಂದ ಯುವತಿ ಸೈಬರ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಆಕೆ ಇತ್ತೀಚಿಗೆ ಕೆಲ ದಿನಗಳ ಕಾಲ ರಜೆ ತೆಗೆದುಕೊಂಡಿದ್ದಳಂತೆ. ಇದೇ ವಿಚಾರಕ್ಕೆ ಯುವತಿ ಮತ್ತು ಮಾಲೀಕನ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಮಾಲೀಕ ಸಾರ್ವಜನಿಕರ ಮುಂದೆ ಯುವತಿಗೆ ಅಶ್ಲೀಲವಾಗಿ ನಿಂದಿಸಿ ತಲೆ ಕಡಿಯುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಸೈಬರ್ ಮಾಲೀಕನ ದರ್ಪವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದು, ಬಳಿಕ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಆದರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಸೈಬರ್ ಸೆಂಟರ್ ಮಾಲೀಕ ಸೈಯದ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ | ನೆಲಕ್ಕುರುಳಿದ ಕಟೌಟ್ ; ಮೂವರಿಗೆ ಗಾಯ



















