ಬೆಂಗಳೂರು: ನೀವೇನಾದರೂ ಐಟಿಐ ಕೋರ್ಸ್ ಮುಗಿಸಿ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 35 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 35 ಅಪ್ರೆಂಟಿಸ್ ಟ್ರೈನೀಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL)
ಹುದ್ದೆಯ ಹೆಸರು: ಅಪ್ರೆಂಟಿಸ್ ಟ್ರೈನಿ
ಒಟ್ಟು ಹುದ್ದೆಗಳು: 35
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 5
ಉದ್ಯೋಗ ಸ್ಥಳ: ಬೆಂಗಳೂರು
ಫಿಟ್ಟರ್, ಎಲೆಕ್ಟ್ರಿಶಿಯನ್, ಮೆಷಿನಿಸ್ಟ್, ಟರ್ನರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 10,560 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈಗಷ್ಟೇ ಕೋರ್ಸ್ ಮುಗಿಸಿದವರು ತರಬೇತಿ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ.
ಸಂದರ್ಶನಕ್ಕೆ ಹಾಜರಾಗುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nal.res.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ RAB Meeting Complex, CSIR-NAL ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಇದನ್ನೂ ಓದಿ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ | 40 ಸಾವಿರ ರೂ. ಸ್ಯಾಲರಿ



















