ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಚವತ್ತಿ–ಉಮ್ಮಚ್ಚಗಿ ರಸ್ತೆಯ ಗೊರ್ಸಗದ್ದೆ ಬಳಿ ಮೈಸೂರಿನಿಂದ ದಾಂಡೇಲಿ ಕಡೆ ಬರುವ ಖಾಸಗಿ ಬಸ್ ಧರೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್‌ನಲ್ಲಿ 30 ಜನ ಪ್ರವಾಸಿಗರು ಪ್ರಯಾಣಿಸುತ್ತಿದ್ದರು.
ಚಾಲಕ ನಿರಂತರ ಬಸ್ ಚಾಲನೆಯಿಂದ ನಿದ್ದೆಗೆ ಜಾರಿದ್ದ, ಇದರಿಂದ ನಿಯಂತ್ರಣ ತಪ್ಪಿ ಬಸ್ ಧರೆಗೆ ಬಿದ್ದಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಹಲವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು


















